ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ದು ಶಿಲಾನ್ಯಾಸ ನೆರವೇರಿಸಿದ್ದಾರೆ.
ಹೊಸ ವಿನ್ಯಾಸದೊಂದಿಗೆ ನಿರ್ಮಾಣವಾಗುತ್ತಿರುವ ಈ ಕಟ್ಟಡ ಸುಮಾರು 120 ಕೋಟಿ ರೂಪಾಯಿ ವೆಚ್ಚದಲ್ಲಿ ರೆಡಿಯಾಗುತ್ತಿದೆ.
ಇನ್ನು ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಆಹ್ವಾನಿಸಿರಲಿಲ್ಲವಂತೆ. ಹೀಗಾಗಿ ಸಿಎಂ ಎದುರಲ್ಲೇ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ನನ್ನನ್ನು ಕಾರ್ಯಕ್ರಮಕ್ಕೆ ಕರೆದಿಲ್ಲ ಎಂದು ಸಿಎಂ ಎದುರಲ್ಲೇ ಹೇಳಿದ್ದಾರೆ ಕೇಂದ್ರ ಸಚಿವ.
ಕಾರ್ಯಕ್ರಮಕ್ಕೆ ಕರೆಯದೇ ಇದ್ದರೂ ಬಂದಿದ್ದೆ. ಆದರೆ ಅಧಿಕಾರಿಗಳು ಇದಕ್ಕೂ ಪ್ರತಿಕ್ರಿಯೆ ನೀಡಿಲ್ಲ. ನಾನು ವಾಪಸ್ ತೆರಳುವೆ ಎಂದು ಹೇಳಿದ್ದಾರೆ. ಈ ವೇಳೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಅವರನ್ನು ಮನವೊಲಿಸಿ ಕ್ಷಮೆ ಕೇಳಿದ್ದಾರೆ. ನಂತರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.