ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 75,083 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 55 ಲಕ್ಷ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55, 62,664ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,053 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 9,75,861 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 44,97,868 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 9,33,185 ಜನರಲ್ಲಿ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈ ವರೆಗೆ 6,53,25,779 ಜನರಲ್ಲಿ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.