ಖ್ಯಾತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರ ಇಡೀ ಬಾಲಿವುಡ್ ಚಿತ್ರರಂಗವನ್ನೇ ಬೆಚ್ಚಿಬೀಳಿಸಿದೆ.
ಮಹೇಂದ್ರ ಸಿಂಗ್ ಧೋನಿಯವರ ಜೀವಾನಾಧರಿತ ಚಿತ್ರದಲ್ಲಿ ನಟಿಸಿದ್ದ, ಸುಶಾಂತ್ ಸಿಂಗ್ ರಜಪೂತ್ ಅಮೀರ್ ಖಾನ್ ಅಭಿನಯದ ಪಿಕೆ ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲೂ ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು.
ಬಿಹಾರದ ಪಾಟ್ನಾದಲ್ಲಿ 1986 ರ ಜನವರಿ 21 ರಂದು ಸುಶಾಂತ್ ಸಿಂಗ್ ಜನಿಸಿದ್ದು, ಕೇವಲ 34 ನೇ ವಯಸ್ಸಿಗೇ ಇಹಲೋಕ ತ್ಯಜಿಸಿರುವುದು ದಿಗ್ಬ್ರಮೆಯನ್ನುಂಟು ಮಾಡಿದೆ.
ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆನ್ನಲಾಗಿದ್ದು, ಮನೆಗೆಲಸಗಾರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.