ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಪಕ್ಷ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರ್ಪಡೆಗೊಳ್ಳಲಿದೆ ಎನ್ನಲಾಗಿದ್ದು, ಈ ಕುತೂಹಲಕ್ಕೆ ಇಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.
ಜಗನ್ ಮೋಹನ್ ರೆಡ್ಡಿ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೈತ್ರಿಯ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ದಕ್ಷಿಣ ಭಾರತದಲ್ಲಿ ತನ್ನ ಪ್ರಾಬಲ್ಯ ವಿಸ್ತರಿಸಲು ಯತ್ನಿಸುತ್ತಿರುವ ಬಿಜೆಪಿ ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತಮಿಳುನಾಡಿನಲ್ಲಿ ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಅಧಿಕಾರ ಗಳಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಇದರ ಮಧ್ಯೆ ಆಂಧ್ರಪ್ರದೇಶದ ಪ್ರಭಾವಿ ನಾಯಕರಾಗಿರುವ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕಗೊಂಡಿದೆ.