ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ವಿಳಂಬವಾಗಬಹುದೇನೋ ಎಂಬ ವದಂತಿ ಮಧ್ಯೆ ಭಕ್ತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜೂನ್ 10 ರ ಬುಧವಾರದಿಂದ ರಾಮಮಂದಿರ ನಿರ್ಮಾಣ ಕಾರ್ಯ ಶುರುವಾಗಲಿದೆ ಎಂದು ಹೇಳಲಾಗಿದೆ.
ಈಗಾಗಲೇ ಮಂದಿರ ನಿರ್ಮಾಣ ಮಾಡುವ ಸ್ಥಳದಲ್ಲಿ ಭೂಮಿ ಸಮತಟ್ಟು ಮಾಡುವ ಕಾರ್ಯ ಮುಗಿದಿದ್ದು, ಬುಧವಾರದಿಂದ ಮಂದಿರ ನಿರ್ಮಾಣಕ್ಕೆ ಅಧಿಕೃತ ಚಾಲನೆ ನೀಡಲಾಗುವುದು ಎಂದು ತಿಳಿದುಬಂದಿದೆ.
ರುದ್ರಾಭಿಷೇಕದ ಮೂಲಕ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಜೊತೆಗೆ ಒಡನಾಟ ಹೊಂದಿರುವ ಸಾಧುಗಳು ತಿಳಿಸಿದ್ದಾರೆ.