ಕೋವಿಡ್-19 ಕಾರಣ ಕಳೆದ ತಿಂಗಳು ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಸಿಗ್ತಿದೆ. ಕೊರೊನಾ ಕಾರಣಕ್ಕೆ ಅಥವಾ ಕಂಟೈನ್ ವಲಯಗಳಲ್ಲಿದ್ದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14, ಬುಧವಾರ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಇಂದು ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಕೋವಿಡ್ ಕಾರಣದಿಂದಾಗಿ ಅಥವಾ ಕಂಟೈನ್‌ಮೆಂಟ್ ವಲಯದಲ್ಲಿದ್ದ ಕಾರಣ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಈ ಆದೇಶಗಳನ್ನು ನೀಡಿದೆ.
ನೀಟ್ ಪರೀಕ್ಷೆ ಸೆಪ್ಟೆಂಬರ್ 12ರಂದು ನಡೆದಿತ್ತು. ಅಕ್ಟೋಬರ್ 16ರಂದು ಪರೀಕ್ಷೆ ಫಲಿತಾಂಶ ನಿರೀಕ್ಷಿಸಲಾಗಿತ್ತು. ಕೊರೊನಾ ಹೆಚ್ಚಾಗ್ತಿರುವ ಕಾರಣ ನೀಟ್ ಪರೀಕ್ಷೆ ಮುಂದೂಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಎರಡು ಬಾರಿಯೂ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ಮೇ 3ರಂದು ಪರೀಕ್ಷೆ ನಡೆಯಬೇಕಿತ್ತು. ಅದನ್ನು ಜುಲೈ 26ಕ್ಕೆ ಮುಂದೂಡಲಾಗಿತ್ತು. ನಂತ್ರ ಸೆಪ್ಟೆಂಬರ್ ನಲ್ಲಿ ಪರೀಕ್ಷೆ ನಡೆದಿದೆ. 15.97 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು.