ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಗೊಳಿಸಿದ್ದು, ಜೂನ್ 30 ಕ್ಕೆ ಐದನೇ ಹಂತದ ಲಾಕ್ಡೌನ್ ಅಂತ್ಯಗೊಳ್ಳಲಿದೆ.
ಇದರ ಮಧ್ಯೆ ಬಹಳಷ್ಟು ಸಡಿಲಿಕೆಗಳನ್ನು ನೀಡಿರುವ ಕಾರಣ ಬಹುತೇಕ ಚಟುವಟಿಕೆಗಳು ಆರಂಭವಾಗಿವೆ. ಆದರೆ ಶಾಲಾ – ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ.
ಇದೀಗ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮಹತ್ವದ ಹೇಳಿಕೆ ನೀಡಿದ್ದು, ಆಗಸ್ಟ್ 15ರ ಬಳಿಕವೇ ಶಾಲಾ – ಕಾಲೇಜು ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.
ಈ ಅವಧಿಯ ಮಧ್ಯೆ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ನೀಡುವ ಕುರಿತು ಪ್ರಯತ್ನ ನಡೆದಿದೆ ಎಂದು ಅವರು ಹೇಳಿದ್ದಾರೆ.