ಚೆನ್ನೈ: ಕಾಲಿವುಡ್ ಸ್ಟಾರ್ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ’ಮಾಸ್ಟರ್’ ಬಿಡುಗಡೆಗೆ ಮುನ್ನವೇ ಆನ್ ಲೈನ್ ನಲ್ಲಿ ಲೀಕ್ ಆಗಿದ್ದು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಇಡೀ ಚಿತ್ರತಂಡಕ್ಕೆ ಆಘಾತವನ್ನುಂಟುಮಾಡಿದೆ.
ಜನವರಿ 13ರಂದು ಮಾಸ್ಟರ್ ಚಿತ್ರ ಥಿಯೇಟರ್ ಗೆ ಲಗ್ಗೆ ಇಡುತ್ತಿದ್ದು, ಬಿಡುಗಡೆಗೆ ಕೆಲವೇ ಗಂಟೆಗಳ ಮೊದಲು ಚಿತ್ರ ಆನ್ ಲೈನ್ ನಲ್ಲಿ ಲೀಕ್ ಆಗಿದೆ. ಇದರಿಂದ ಬೇಸರ ವ್ಯಕ್ತಪಡಿಸಿರುವ ನಿರ್ದೇಶಕ ಲೋಕೇಶ್ ಕನಕರಾಜ್, ಚಿತ್ರತಂಡದ ಒಂದು ವರ್ಷದ ಶ್ರಮ ವ್ಯರ್ಥವಾಗಿದ್ದು ನೋವುಂಟು ಮಾಡಿದೆ. ಆದರೂ ಅಭಿಮಾನಿಗಳಲ್ಲಿ, ಚಿತ್ರರಸಿಕರಲ್ಲಿ ಒಂದು ಮನವಿ. ದಯವಿಟ್ಟು ಲೀಕ್ ಆದ ಕಾಪಿಯನ್ನು ನೋಡದೇ ಪ್ರೇಕ್ಷಕರು ಚಿತ್ರಮಂದಿರಕ್ಕೆ ಹೋಗಿ ಚಿತ್ರವನ್ನು ವೀಕ್ಷಿಸಿ ಎಂದು ಕೇಳಿಕೊಂಡಿದ್ದಾರೆ.
ಮಾಸ್ಟರ್ ನಿರ್ದೇಶಕರ ಮನವಿಗೆ ಬೆಂಬಲ ವ್ಯಕ್ತಪಡಿಸಿರುವ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ನಾವೆಲ್ಲರೂ ಮಾಸ್ಟರ್ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡುತ್ತೇವೆ, ನೋಡಬೇಕು ಕೂಡ….. ’ಕಿಲ್ ಪೈರೆಸಿ’ ಎಂದು ಟ್ವೀಟ್ ಮಾಡಿದ್ದಾರೆ