ಪಾಟ್ನಾ: ಚೈಬಾಸಾ ಖಜಾನೆ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ, ಆರ್ ಜೆಡಿ ಮುಖಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಚೈಬಾಸಾ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್, ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದೆ. ಆದರೆ ಲಾಲು ಯಾದವ್ ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಕಾರಣ ಲಾಲು ವಿರುದ್ಧ ಧುಮ್ಕಾ ಖಜಾನೆ ಪ್ರಕರಣ ಕೂಡ ಇರುವುದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಇನ್ನೂ ಬೇಲ್ ಸಿಕ್ಕಿಲ್ಲ. ಹೀಗಾಗಿ ಲಾಲು ಪ್ರಸಾದ್ ಯಾದವ್ ಅವರ ಜೈಲು ವಾಸ ಮುಂದುವರೆಯಲಿದೆ.