
ಕೊಲ್ಕತ್ತಾದ ಕಾಳಿಘಾಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಇನ್ನು ಈ ಅಗ್ನಿ ಅನಾಹುತದಲ್ಲಿ ಒಬ್ಬರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಈ ಕಟ್ಟಡದಲ್ಲಿ ಬೆಂಕಿ ಬಿದ್ದಿದ್ದು ಹೇಗೆ ಎಂಬುದು ತಿಳಿದು ಬಂದಿಲ್ಲ.
ಹೌದು, ಕಾಳಿಘಾಟ್‌ನ ಪ್ರದೇಶದಲ್ಲಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಇಂದು ಬೆಳಗಿನ ಜಾವದಲ್ಲಿ ಬೆಂಕಿ ಬಿದ್ದಿದೆ. ನಾಲ್ಕು ಅಗ್ನಿ ಶಾಮಕ ವಾಹನಗಳು 2
ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿವೆ.