alex Certify ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್

ದೇಶದಲ್ಲಿ ಕೊರೊನಾ ರಣಕೇಕೆ ಇನ್ನು ನಿಂತಿಲ್ಲ. ಕೊರೊನಾ ಕರಿ ನೆರಳು ದೇಶದ ಮೇಲೆ ಬಿದ್ದಾಗಿನಿಂದಲೂ ದೇಶ ನಲುಗಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆಯಾಯ ರಾಜ್ಯಗಳು ಏನೇ ಕ್ರಮ ಕೈಗೊಂಡರೂ ಕೊರೊನಾ ಸೋಂಕು ಹರಡುವುದನ್ನು ಮಾತ್ರ ತಡೆಯಲು ಸಾಧ್ಯವಾಗುತ್ತಿಲ್ಲ.

ದೇಶದಲ್ಲಿ ಕೇವಲ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ. ಈ ಅವಧಿಯಲ್ಲಿ ಬರೋಬ್ಬರಿ 3604 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ. ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 70,756 ಕ್ಕೆ ಏರಿಕೆಯಾಗಿದೆ.

70,756 ಮಂದಿ ಸೋಂಕಿತರಲ್ಲಿ ಈವರೆಗೂ 22,454 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ 2293 ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ. ಈ ವೈರಸ್ ಹರಡುವುದು ಕ್ಲಸ್ಟರ್ ಮಟ್ಟದಲ್ಲಿ ಮಾತ್ರ ಇದೆ. ಅದೃಷ್ಟವಶಾತ್ ಸಮುದಾಯಕ್ಕೆ ಹರಡಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...