alex Certify ಬೆಚ್ಚಿಬೀಳಿಸುವಂತಿದೆ ಕೊರೊನಾ ‘ಲಾಕ್ ಡೌನ್’ ನಿಂದಾಗಿ ಆಗಿರುವ ನಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಕೊರೊನಾ ‘ಲಾಕ್ ಡೌನ್’ ನಿಂದಾಗಿ ಆಗಿರುವ ನಷ್ಟ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಾರಣಾಂತಿಕ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದೆ. ಈಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಮೊದಲೆರಡು ಲಾಕ್ಡೌನ್ ಅನ್ನು ಬಲು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗಿತ್ತು.

ಈ ಸಂದರ್ಭದಲ್ಲಿ ದೇಶದಾದ್ಯಂತ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಯಾವುದೇ ಕೆಲಸ ಕಾರ್ಯವಿಲ್ಲದೆ ಸಾರ್ವಜನಿಕರು ಮನೆಯಲ್ಲೇ ಕುಳಿತುಕೊಳ್ಳುವಂತಾಗಿತ್ತು. ಇದೀಗ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆ ಮಾಡಿ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಲಾಗಿದ್ದರೂ ಈ ಮೊದಲಿನಂತೆ ವ್ಯವಹಾರಗಳು ನಡೆಯುತ್ತಿಲ್ಲ.

ಇದರಿಂದಾಗಿ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದು, ಇದರ ಮಧ್ಯೆ ಲಾಕ್ ಡೌನ್ ನಿಂದಾಗಿ ದೇಶಕ್ಕಾಗಿರುವ ನಷ್ಟವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ. ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಎಸ್.ಬಿ.ಐ. ತನ್ನ ವರದಿಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...