alex Certify ಬೆರಗಾಗಿಸುತ್ತೆ ʼಮಹಾʼ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಹೊಂದಿರುವ ಆಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆರಗಾಗಿಸುತ್ತೆ ʼಮಹಾʼ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಹೊಂದಿರುವ ಆಸ್ತಿ

ಲಾಕ್‌ ಡೌನ್ ಮಧ್ಯೆಯೂ ಮಹಾರಾಷ್ಟ್ರದಲ್ಲಿ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಪರಿಷತ್ ಸ್ಥಾನಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸೋಮವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಉದ್ದವ್ ಠಾಕ್ರೆ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇನ್ನು ಪರಿಷತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಜೊತೆಗೆ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಕುಟುಂಬದಲ್ಲಿ ತಾವು ಒಟ್ಟು 143.26 ಕೋಟಿ ರೂಪಾಯಿಗಳನ್ನು ಆಸ್ತಿಯನ್ನು ಹೊಂದಿದ್ದು, ಈ ಪೈಕಿ 76.59 ಕೋಟಿ ರೂ.ಗಳ ವೈಯಕ್ತಿಕ ಆಸ್ತಿಯನ್ನು ಹೊಂದಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಇನ್ನು 15.50 ಕೋಟಿ ರೂಪಾಯಿ ಸಾಲ ಇದೆ ಎಂದು ನಮೂದಿಸಿದ್ದಾರೆ. ಇಷ್ಟೆಲ್ಲ ಆಸ್ತಿ ಇದ್ದರೂ ಇವರ ಬಳಿ ಕಾರು ಇಲ್ಲ ಎಂದು ಹೇಳಿಕೊಂಡಿದ್ದಾರೆ. ನಿಜಕ್ಕೂ ಇದು ಆಶ್ಚರ್ಯಕರ ಸಂಗತಿಯೇ ಸರಿ. ಮೇ 21ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...