
ತಮಿಳುನಾಡಿನ ಕನ್ಯಾಕುಮಾರಿ ಕ್ಷೇತ್ರದ ಸಂಸದ 70 ವರ್ಷದ ಹೆಚ್. ವಸಂತ್ ಕುಮಾರ್ ಕೊರೊನಾಗೆ ಬಲಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಎರಡು ಬಾರಿ ಶಾಸಕರಾಗಿದ್ದ ವಸಂತ್ ಕುಮಾರ್ ಇದೇ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಕೊರೊನಾ ಸೋಂಕಿಗೊಳಗಾಗಿದ್ದ ಅವರನ್ನು ಆಗಸ್ಟ್ 10 ರಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.