ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,791 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 75,97,064ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 587 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,15,197ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇನ್ನೂ 7,48,538 ಸಕ್ರಿಯ ಪ್ರಕರಣಗಳಿದ್ದು, 67,33,329 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.