alex Certify ಬ್ರೇಕಿಂಗ್ ನ್ಯೂಸ್: ಕಳೆದ 24ಗಂಟೆಯಲ್ಲಿ ವರದಿಯಾಗಿದೆ ಇಷ್ಟೊಂದು ಕೊರೊನಾ ಸೋಂಕು ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಕಳೆದ 24ಗಂಟೆಯಲ್ಲಿ ವರದಿಯಾಗಿದೆ ಇಷ್ಟೊಂದು ಕೊರೊನಾ ಸೋಂಕು ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 61,871 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 1033 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,14,031ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 7,83,311 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 65,97,210 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನ 9,70,173 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ ದೇಶದಲ್ಲಿ 9,42,24,190 ಜನರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...