alex Certify ಬ್ರೇಕಿಂಗ್ ನ್ಯೂಸ್: ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರ ಶೋವಿಕ್ ಚಕ್ರವರ್ತಿಯವರ ಜಾಮೀನು ಅರ್ಜಿ ವಜಾಗೊಂಡಿದೆ.

ಪ್ರಕರಣ ಸಂಬಂಧ ಎನ್.ಸಿ.ಬಿ.ಯಿಂದ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿ ಹಾಗೂ ಸಹೋದರ ಶೋವಿಕ್ ಚಕ್ರವರ್ತಿ ಪರ ವಕೀಲರು ಜಾಮೀನಿಗಾಗಿ ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೂಡ ಕೇಳಿಬಂದಿತ್ತು. ಅಲ್ಲದೇ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳಲು ನಟಿ ರಿಯಾ ಹಾಗೂ ಆಕೆ ಕುಟುಂಬದವರ ಪ್ರಚೋದನೆ ಕಾರಣ ಎಂದು ಸುಶಾಂತ್ ತಂದೆ ಕೆ.ಕೆ. ಸಿಂಗ್ ಪಾಟ್ನಾ ಪೊಲೀಸರಿಗೆ ದೂರು ನೀಡಿದ್ದರು.

ಈ ಕಾರಣಕ್ಕಾಗಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆ ಸಹೋದರನನ್ನು ಎನ್.ಸಿ.ಬಿ. ಬಂಧಿಸಿತ್ತು. ಇದೀಗ ಇಬ್ಬರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿರುವುದರಿಂದ ಮುಂಬೈನ ಬೈಕುಲಾ ಜೈಲಿನಲ್ಲೇ ರಿಯಾ ಹಾಗೂ ಶೋವಿಕ್ ಕಾಲ ಕಳೆಯುವಂತಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...