ಹೈದರಾಬಾದ್: ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚುತ್ತಿದ್ದು, ಹಲವರು ಈ ಹೊಸ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ಯಾಣ ಹಾಗೂ ರಾಜಸ್ಥಾನ ಸರ್ಕಾರಗಳು ಬ್ಲ್ಯಾಕ್ ಫಂಗಸ್ ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿವೆ. ಈ ನಡುವೆ ತೆಲಂಗಾಣ ಸರ್ಕಾರ ಕೂಡ ಕಪ್ಪು ಶಿಲೀಂದ್ರ ಸೋಂಕನ್ನು ಸಾಂಕ್ರಾಮಿಕ ಎಂದು ಘೋಷಿಸಿದೆ.
ಬ್ಲ್ಯಾಕ್ ಫಂಗಸ್ ಅಪಾಯಕಾರಿ ಹಾಗೂ ಗಂಭೀರವಾದ ಸಾಂಕ್ರಾಮಿಕ ರೋಗವಾಗಿದ್ದು, ತೆಲಂಗಾಣದಲ್ಲಿ 50ಕ್ಕೂ ಹೆಚ್ಚು ಜನರಲ್ಲಿ ಪತ್ತೆಯಾಗಿದೆ ಎಂದು ಸರ್ಕಾರ ಹೇಳಿದೆ. ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆಯೇ ಚಿಕಿತ್ಸೆ ನೀಡಬೇಕು ಎಂದು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ತಾಕೀತು ಮಾಡಿದೆ.
ಲಸಿಕೆ ನಿರೀಕ್ಷೆಯಲ್ಲಿದ್ದ ದೇಶದ ಜನತೆಗೆ ಜೆ.ಪಿ. ನಡ್ಡಾ ಗುಡ್ ನ್ಯೂಸ್
ತೆಲಂಗಾಣದಲ್ಲೂ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧಿ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ.