ಚುನಾವಣೆಗಳಲ್ಲಿ ಅಕ್ರಮ ನಡೆಯುವುದು ಸಾಮಾನ್ಯ ಸಂಗತಿ ಎಂಬಂತಾಗಿದೆ. ಮತದಾರರನ್ನು ಸೆಳೆಯಲು ಹಣ, ಹೆಂಡ, ಚಿನ್ನ-ಬೆಳ್ಳಿ ಹೀಗೆ ಆಮಿಷಗಳನ್ನು ಅಭ್ಯರ್ಥಿಗಳು ಒಡ್ಡುತ್ತಾರೆ. ಆದರೆ ಇಲ್ಲೊಂದು ವಿಶೇಷ ಪ್ರಕರಣ ನಡೆದಿದೆ.
ಅಸ್ಸಾಂ ವಿಧಾನಸಭಾ ಚುನಾವಣೆಗೆ ಏಪ್ರಿಲ್ 1ರಂದು ಮತದಾನ ನಡೆದಿದ್ದು, ಈ ವೇಳೆ ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 107(ಎ) ರಲ್ಲಿ ಪಟ್ಟಿಯಲ್ಲಿ ಇದ್ದದ್ದಕ್ಕಿಂತ ಹೆಚ್ಚು ಮತಗಳು ಚಲಾವಣೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಿ…!
ಈ ಮತಗಟ್ಟೆಯಲ್ಲಿ 90 ಮಂದಿ ಮತದಾರರಿದ್ದು, ಆದರೆ 181 ಮಂದಿ ಮತ ಚಲಾಯಿಸಿದ್ದಾರೆ. ಹೀಗಾಗಿ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಆರೋಪ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಇದೀಗ ಚುನಾವಣಾ ಆಯೋಗ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸಿದ್ದ 6 ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಮತಗಟ್ಟೆಯಲ್ಲಿ ಮರು ಮತದಾನ ನಡೆಸಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ.