
ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಆರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿವೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯುತ್ತಿದ್ದು, ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ಪ್ರಚಾರ ಕಾರ್ಯ ನಡೆಸಿದ್ದಾರೆ.
ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಚಿವರಿಂದ ಸಿಹಿ ಸುದ್ದಿ
ಸಂಸದ ಮನೋಜ್ ತಿವಾರಿ ಅವರು ಸಹ ಬಿಜೆಪಿ ಅಭ್ಯರ್ಥಿಗಳ ಪರ ವಿಭಿನ್ನವಾಗಿ ಪ್ರಚಾರ ಕಾರ್ಯ ನಡೆಸಿದ್ದು, ಎಲ್ಲರ ಗಮನ ಸೆಳೆದಿದೆ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದ ಅವರು ಕೈಗಾಡಿ ಎಳೆಯುವ ಮೂಲಕ ಮತದಾರರನ್ನು ಓಲೈಸಲು ಮುಂದಾಗಿದ್ದಾರೆ.
