alex Certify ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ದೆಹಲಿಯಲ್ಲಿ ಮೇ 17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಮೆಟ್ರೋ ಸಂಚಾರ ಕೂಡ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣ ಕೊಂಚ ಪ್ರಮಾಣದಲ್ಲಿ ತಗ್ಗಿದ್ದು, ಶೇ.35ರಿಂದ ಶೇ.23ರಷ್ಟು ಕಡಿಮೆಯಾಗಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಉತ್ತರ ಪ್ರದೇಶ ಸರ್ಕಾರ ಕೂಡ ಮೇ 17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...