ದೇಶದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಯಾವುದೇ ಕಾನೂನು ಜಾರಿಗೆ ತಂದ್ರೂ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿಲ್ಲ.
ಜಾರ್ಖಂಡ್ ನಲ್ಲಿ 50 ವರ್ಷದ ವಿಧವೆ ಮೇಲೆ ಪಾಪಿಗಳು ಅತ್ಯಾಚಾರವೆಸಗಿದ್ದಾರೆ.
ಜಾರ್ಖಂಡದ ಚತರಾ ಜಿಲ್ಲೆಯಲ್ಲಿ 50 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮೂವರು ಯುವಕರು ಈ ಕೃತ್ಯವೆಸಗಿದ್ದಾರೆ. ಕಾಮತೃಷೆ ತೀರಿಸಿಕೊಂಡವರು ಮಹಿಳೆ ಖಾಸಗಿ ಅಂಗಕ್ಕೆ ಗ್ಲಾಸ್ ಹಾಕಿದ್ದಾರೆ. ಮಹಿಳೆಗೆ ಹಂಟರ್‌ಗಂಜ್‌ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಕೆ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೊಬ್ಬ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತರ ವಿಚಾರಣೆ ನಡೆಯುತ್ತಿದೆ. ಇನ್ನೊಬ್ಬ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಒತ್ತಡಗಳು ಕೇಳಿ ಬರ್ತಿವೆ.