alex Certify ಮಾಜಿ ಸಚಿವರ ಪುತ್ರ NCB ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವರ ಪುತ್ರ NCB ವಶಕ್ಕೆ

ಬೆಂಗಳೂರು: ಡ್ರಗ್ಸ್ ಜಾಲಕ್ಕೆ ಹಣ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೊಡಿಯೆರಿಯನ್ನು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಡ್ರಗ್ಸ್ ಪೆಡ್ಲರ್ ಮೊಹಮ್ಮದ್ ಗೆ ಹಣ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆಯೇ ಬಂಧನಕ್ಕೀಡಾಗಿದ್ದ ಬಿನೇಶ್ ಕೊಡಿಯೇರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿನೇಶ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಕೇರಳ, ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಬಿನೇಶ್, ಡ್ರಗ್ಸ್ ಜಾಲದ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಣ ನೀಡಿದ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಸುವ ನಿಟ್ಟಿನಲ್ಲಿ ಎನ್ ಸಿಬಿ ಅಧಿಕಾರಿಗಳು ಇದೀಗ ಬಿನೇಶ್ ನನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...