ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮೀಸಲಾತಿ ಮೂಲಭೂತ ಹಕ್ಕಲ್ಲ. ಇದು ಹಿಂದುಳಿದವರ ಏಳಿಗೆಗೆ ನೆರವಾಗಬಲ್ಲ ಊರುಗೋಲು ಮಾತ್ರ ಎಂದು ಸ್ಪಷ್ಟವಾಗಿ ಹೇಳಿದೆ.
ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಮೀಸಲಾತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಷಯವಾಗಿದೆ. ಅದು ನಮ್ಮ ಮೂಲಭೂತ ಹಕ್ಕು ಎಂದು ಯಾರೂ ಪ್ರತಿಪಾದಿಸುವಂತಿಲ್ಲ ಎಂದು ಹೇಳಿರುವ ನ್ಯಾಯಪೀಠ, ಒಂದೊಮ್ಮೆ ಮೀಸಲಾತಿ ನೀಡದೆ ಹೋದ ಪಕ್ಷದಲ್ಲಿ ಅದು ನಿಯಮ ಉಲ್ಲಂಘನೆಯಾದಂತಾಗುವುದಿಲ್ಲ ಎಂದು ಹೇಳಿದೆ.