ನವದೆಹಲಿ: ನಗ್ರೊಟಾದಲ್ಲಿ ನಡೆದಿದ್ದ ಉಗ್ರರ ಎನ್ ಕೌಂಟರ್ ಬೆನ್ನಲ್ಲೇ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, 26/11ರ ದಾಳಿ ಮಾದರಿಯಲ್ಲೇ ಮತ್ತೊಂದು ದಾಳಿಗೆ ಪಾಕ್ ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗಿದೆ.
ನಿನ್ನೆ ನಗ್ರೊಟಾದಲ್ಲಿ ನಾಲ್ವರು ಉಗ್ರರನ್ನು ಭದ್ರತಾಪಡೆ ಸಿಬ್ಬಂದಿಗಳು ಹತ್ಯೆಗೈದಿದ್ದರು. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು.
ಉಗ್ರರ ಎನ್ ಕೌಂಟರ್ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಉಗ್ರರ ಕುರಿತಾದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನಗ್ರೊಟಾದಲ್ಲಿ ಎನ್ ಕೌಂಟರ್ ಆದ ಪಾಕ್ ಉಗ್ರರು ಮುಂಬೈ ದಾಳಿ ಮಾದರಿಯಲ್ಲಿಯೇ ಮತ್ತೊಂದು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆ ಮಹತ್ವಪೂರ್ಣವಾಗಿದ್ದು, ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ, ಗುಪ್ತಚರ ಅಧಿಕಾರಿಗಳು ಭಾಗಿಯಾಗಿದ್ದಾರೆ.