ವರ್ಷದ ಹಿಂದೆ ದೇಶದಲ್ಲಿ ಕಾಣಿಸಿಕೊಂಡ ಕಾರಣ ಸರಿಯಾಗಿ ಒಂದು ವರ್ಷದ ಬಳಿಕ ಎರಡನೆ ಅಲೆ ಮೂಲಕ ಮತ್ತೊಮ್ಮೆ ಅಬ್ಬರಿಸಲು ಆರಂಭಿಸಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದು ಮುಂದಿನ ಮೂರು ತಿಂಗಳ ಕಾಲ ಮುಂದುವರಿಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ದೇಶದಲ್ಲಿ ಆರಂಭಗೊಂಡಿರುವ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿದ್ದು, ನೂರು ದಿನಗಳ ಕಾಲ ಇದರ ಅಬ್ಬರ ಇರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಹೇಳಿದ್ದಾರೆ.
ಗಮನಿಸಿ…! ಇಂದು ಭಾರತ್ ಬಂದ್ -ರಾಜ್ಯದಲ್ಲಿ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಕೊರೊನಾ ನಿಯಂತ್ರಣಕ್ಕಾಗಿ ಹಲವು ನಿರ್ಬಂಧಗಳನ್ನು ಹೇರುತ್ತಿದ್ದು, ಸೋಂಕು ತೀವ್ರವಾದರೆ ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಹೇರಿದರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಕಠಿಣ ಕ್ರಮ ಬೇಡವೆಂದರೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ.
ಈ ಹಿಂದೆ ವಿಧಿಸಿದ ಲಾಕ್ ಡೌನ್ ನಿಂದ ಜನಸಾಮಾನ್ಯರು ಆರ್ಥಿಕವಾಗಿ ತೀವ್ರ ಹೊಡೆತ ತಿಂದಿದ್ದು, ಒಂದೊಮ್ಮೆ ಮತ್ತೆ ಲಾಕ್ ಡೌನ್ ಆರಂಭಿಸಿದರೆ ಬದುಕು ಮೂರಾಬಟ್ಟೆಯಾಗುವುದು ಖಚಿತ. ಹೀಗಾಗಿ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕೊರೊನಾ ಸೋಂಕಿನಿಂದ ಪಾರಾಗುವುದರ ಜೊತೆಗೆ ಆರ್ಥಿಕ ಸಂಕಷ್ಟದಿಂದಲೂ ತಪ್ಪಿಸಿಕೊಳ್ಳಬಹುದಾಗಿದೆ.