ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆ ಮಧ್ಯೆ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಂದಿನ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಅಧ್ಯಕ್ಷರ ಬಗ್ಗೆ ಪ್ರತಿಭಟನೆ ನಡೆದಿತ್ತು.
2019ರ ಮೇ ತಿಂಗಳಿನಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವ್ರ ರಾಜೀನಾಮೆ ನಂತ್ರ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ನ ಒಂದು ಗುಂಪು ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆಗೆ ಒತ್ತಾಯಿಸಿದೆ. ಅಧ್ಯಕ್ಷರು ಸಕ್ರಿಯವಾಗಿ ಕೆಲಸ ಮಾಡಬೇಕೆಂಬ ಬೇಡಿಕೆಯಿಟ್ಟಿದೆ.
ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಪ್ರಸ್ತಾಪಗಳನ್ನು ಅಂಗೀಕರಿಸಲಾಗಿದೆ. ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಖಾಸಗಿ ಚಾನೆಲ್ ಸಂಪಾದಕರ ವಾಟ್ಸಾಪ್ ಚಾಟ್‌ನಲ್ಲಿ ರಾಷ್ಟ್ರೀಯ ಭದ್ರತೆಯಲ್ಲಿನ ದೋಷಗಳ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ ರಚಿಸುವ ಬೇಡಿಕೆ. ಎಲ್ಲಾ ದೇಶವಾಸಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬೇಕು. ಲಸಿಕೆ ತಯಾರಿಸಿದ್ದಕ್ಕಾಗಿ ವಿಜ್ಞಾನಿಗಳನ್ನು ಶ್ಲಾಘಿಸಲಾಯಿತು.