alex Certify ಮೇ 25ರಿಂದ ಶುರುವಾಗಲಿದೆ ದೇಶಿ ವಿಮಾನ ಹಾರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 25ರಿಂದ ಶುರುವಾಗಲಿದೆ ದೇಶಿ ವಿಮಾನ ಹಾರಾಟ

Vadodara Airport, Vadodara International Airport

ಮೇ25ರಿಂದ ದೇಶಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ಮಾಹಿತಿ ನೀಡಿದ್ದಾರೆ.  ಮೇ 25 ರಿಂದ ದೇಶೀಯ ವಿಮಾನಗಳು ಕಾರ್ಯನಿರ್ವಹಿಸಲಿವೆ ಎಂದು ಪುರಿ ಟ್ವೀಟ್ ಮಾಡಿದ್ದಾರೆ. ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ವಾಯುಯಾನ ಕಂಪನಿಗಳು ಮೇ 25 ರಿಂದ ಕಾರ್ಯಾಚರಣೆಗೆ ಸಿದ್ಧವಾಗಿವೆ ಎಂದಿದ್ದಾರೆ.

ಸೋಮವಾರದಿಂದ ಪ್ರಾರಂಭವಾಗಲಿರುವ ಈ ವಿಮಾನಗಳ ಟಿಕೆಟ್‌ಗಳ ಬುಕಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಅದರ ನಿಖರವಾದ ದಿನಾಂಕವನ್ನು ಇನ್ನೂ ನೀಡಲಾಗಿಲ್ಲ. ಕೊರೊನಾ ವೈರಸ್ ಕಾರಣದಿಂದಾಗಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಕಳೆದ 2 ತಿಂಗಳಿನಿಂದ ವಿಮಾನ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ವಿದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ಮರಳಿ ತರಲು ಸರ್ಕಾರ ಕೆಲಸ ಮಾಡುತ್ತಿದೆ. ಆದ್ರೆ ದೇಶಿ ವಿಮಾನಗಳ ಹಾರಾಟ ಮೇ 25ರಿಂದ ಶುರುವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...