ನವದೆಹಲಿ: ರಾಜ್ಯಸಭೆಯಲ್ಲಿ ಮೊದಲ ದಿನವೇ ತುಂಬಾ ನೋವಾಗಿದೆ. ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ರೈತರಿಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸಿದೆ. ಕೇಂದ್ರದ ನಡೆಗೆ ನನ್ನ ವಿರೋಧವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020ನ್ನು ಧ್ವನಿ ಮತದ ಮೂಲಕ ಅಂಗೀಕರಿಸಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಹೆಚ್.ಡಿ. ದೇವೇಗೌಡ, ರಾಜ್ಯಸಭೆಯ ಮೊದಲ ದಿನವೇ ತುಂಬಾ ನೋವಾಗಿದೆ. ಈ ಬಿಲ್ ಗಳ ಒಳ ಹೊಕ್ಕು ನೋಡಿದರೆ ರೈತರಿಗೆ ಅನುಕೂಲಕ್ಕಿಂತ ಶೋಷಣೆಯೇ ಹೆಚ್ಚು. ಕೇಂದ್ರ ಸರ್ಕಾರದ ಈ ವಿಧೇಯಕಕ್ಕೆ ನನ್ನ ವಿರೋಧವಿದೆ. ನನ್ನ ನಿಲುವು ಯಾವಾಗಲೂ ರೈತರ ಪರ ಎಂದರು.