ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಎಲ್ಲರೂ ಕಾಯುತ್ತಿದ್ದ ದಿನಾಂಕ ಬಹುತೇಕ ಹತ್ತಿರ ಬರ್ತಿದೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ನಂತರ ದೇವಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು.
ಈ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಅಯೋಧ್ಯೆಗೆ ತೆರಳಲಿದ್ದಾರೆ. ಅಯೋಧ್ಯೆಯ ರಾಮ್ ಮಂದಿರ ಟ್ರಸ್ಟ್ ಸಿಬ್ಬಂದಿ ಪಿಎಂ ಮೋದಿ ಭೇಟಿಯನ್ನು ಸ್ವಾಗತಿಸಿದ್ದಾರೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಆಗಸ್ಟ್ 3 ಮತ್ತು 5 ರಂದು ಭೂಮಿ ಪೂಜೆ ಸೂಕ್ತವೆಂದು ಪ್ರಧಾನ ಮಂತ್ರಿಗಳ ಕಚೇರಿಗೆ ಮಾಹಿತಿ ನೀಡಿತ್ತು.
ಆಗಸ್ಟ್ 5ನ್ನು ಪಿಎಂಒ ಆಯ್ಕೆ ಮಾಡಿದೆ. ಮಾಹಿತಿಯ ಪ್ರಕಾರ, ಎಲ್ಲವೂ ಸರಿಯಾಗಿ ನಡೆದರೆ, ಪ್ರಧಾನಿ ನರೇಂದ್ರ ಮೋದಿ ಅವರೇ ಈ ಭೂಮಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಟ್ರಸ್ಟ್ ಕೂಡ ಇದಕ್ಕಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ.