ರಾಜಸ್ಥಾನ ರಾಜಕಾರಣದಲ್ಲಿ ಈಗಾಗಲೇ ಅಲ್ಲೋಲ ಕಲ್ಲೋಲ ಸೃಷ್ಠಿಯಾಗಿದೆ. ಇವರ ಹಗ್ಗ ಜಗ್ಗಾಟದ ನಡುವೆಯೇ ಇದೀಗ ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷೆ ಮಾಯಾವತಿ ತಮ್ಮ ಶಾಸಕರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಹೌದು, ಅಶೋಕ್ ಗೆಹ್ಲೋಟ್ ಸರ್ಕಾರದ ಸಂಖ್ಯಾಬಲ ಪರೀಕ್ಷೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದರೆ, ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ ಎಂದು ತಮ್ಮ ಪಕ್ಷದವರಿಗೆ ಬಿಎಸ್‌ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿ ಇಂದು ಆದೇಶ ಹೊರಡಿಸಿದ್ದಾರೆ. ಸಚಿನ್ ಪೈಲಟ್ ಬೆಂಬಲಿತ 18 ಜನ ಶಾಸಕರು ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ನಿಂತಿದ್ದಾರೆ.
ಆರ್. ಗುಧಾ, ಲಖನ್ ಸಿಂಗ್, ದೀಪ್ ಚಂದ್, ಜೆ.ಎಸ್. ಅವನಾ, ಸಂದೀಪ್ ಕುಮಾರ್ ಮತ್ತು ವಾಜಿಬ್ ಅಲಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಮಾಯಾವತಿ. ಇನ್ನು ಇವರಿಗೆಲ್ಲಾ ವಿಪ್ ಜಾರಿ ಮಾಡಲಾಗಿದೆ. ಇದನ್ನು ಉಲ್ಲಂಘಿಸಿದರೆ ಶಾಸಕ ಸ್ಥಾನಕ್ಕೆ ಕುತ್ತು ಬರಲಿದೆ.