ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಮುಂದಿನ ಎರಡು ವರ್ಷಗಳೊಗಾಗಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಈಗಾಗಲೇ ಮಂದಿರ ನಿರ್ಮಾಣವಾಗುವ ಜಾಗವನ್ನು ಸಮತಟ್ಟುಗೊಳಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ.
ರುದ್ರಾಭಿಷೇಕದ ಬಳಿಕ ಮಂದಿರ ನಿರ್ಮಾಣದ ಪ್ರಮುಖ ಕಾರ್ಯ ಆರಂಭಿಸುವುದಾಗಿ ಸ್ವಾಮಿ ವಾಸುದೇವಾನಂದ ಸರಸ್ವತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.