ರಾಮನ ನಗರ ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಗೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ನಾಳೆ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ಯೋಗಿ ಆದಿತ್ಯನಾಥ್ ಬಂದು ಸಿದ್ಧತೆಗಳ ಪರಿಶೀಲನೆ ನಡೆಸಿದ್ದರು. ಕೊರೊನಾ ವೈರಸ್ ಕಾರಣ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 90ಕ್ಕಿಂತ ಕಡಿಮೆ ಜನರು ಪಾಲ್ಗೊಳ್ಳಲಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಅನೇಕ ಗಣ್ಯರು ಗೈರಾಗಲಿದ್ದಾರೆ. ಮುನ್ನೆಚ್ಚರಿಗೆ ಅಗತ್ಯವಾಗಿರುವ ಕಾರಣ ಮನೆಯಲ್ಲೇ ಕುಳಿತು ಭೂಮಿ ಪೂಜೆ ವೀಕ್ಷಣೆ ಮಾಡುವಂತೆ ಜನರಿಗೆ ಸಲಹೆ ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಬಾಬಾ ರಾಮ್ದೇವ್ ಟ್ವೀಟ್ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದನ್ನು ಕಣ್ತುಂಬಿಕೊಳ್ಳುವುದು ನನ್ನ ಅದೃಷ್ಟವೆಂದು ರಾಮ್ದೇವ್ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಗಣ್ಯರು ಅಯೋಧ್ಯೆಗೆ ಬರ್ತಿದ್ದಾರೆ. ಮೋಹನ್ ಭಾಗವತ್ ಕೂಡ ಲಖನೌ ತಲುಪಿದ್ದಾರೆ, ಇಲ್ಲಿಂದ ಅವರು ಅಯೋಧ್ಯೆಗೆ ತೆರಳಲಿದ್ದಾರೆ. ಮೋದಿ ಆಗಮನದ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭೂಮಿ ಪೂಜೆ ನಂತ್ರ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.