ಶಬರಿಮಲೆ ವಿವಾದ ಖ್ಯಾತಿಯ ರೆಹಾನಾ ಫಾತಿಮಾ ಒಂದಲ್ಲ ಒಂದು ವಿವಾದಾತ್ಮಕ ಕೆಲಸಗಳಿಂದ ಸುದ್ದಿಯಾಗುತ್ತಲೇ ಇದ್ದಾರೆ. ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಡದೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದ ಈಕೆಗೆ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಅಯ್ಯಪ್ಪ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದ ಸಂಬಂಧ 2018ರಲ್ಲಿ ಕೇಸ್ ದಾಖಲಾಗಿತ್ತು. ಈ ಕೇಸ್ ಸಂಬಂಧ ವಿಚಾರಣೆ ನಡೆಯುತ್ತಿದ್ದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಷರತ್ತು ಬದ್ದ ಜಾಮೀನು ಇದಾಗಿದ್ದು, ಪ್ರಮುಖ ಷರತ್ತುಗಳನ್ನು ಈಕೆಗೆ ಕೋರ್ಟ್ ವಿಧಿಸಿದೆ.
ಈ ಕೇಸ್ ಪ್ರಕರಣ ಪೂರ್ಣಗೊಳ್ಳುವ ತನಕ ಯಾವುದೇ ಮಾಧ್ಯಮಕ್ಕೆ ಹೇಳಿಕೆಗಳನ್ನು, ತಮ್ಮ ಅಭಿಪ್ರಾಯಗಳನ್ನು ನೀಡುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಜೊತೆಗೆ ಮೂರು ತಿಂಗಳವರೆಗೆ ಸೋಮವಾರ ಹಾಗೂ ಶನಿವಾರ ವಿಚಾರಣಾಧಿಕಾರಿ ಎದುರು ಹಾಜರಾಗಿ ಸಹಿ ಹಾಕಬೇಕು. ಈ ನಿಯಮ ಮೀರಿದಲ್ಲಿ ಜಾಮೀನು ರದ್ದು ಮಾಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ.