alex Certify ‘ಲಾಕ್ ಡೌನ್’ ಮುಗಿಯಲು ಇನ್ನು ಮೂರೇ ದಿನ: ಕುತೂಹಲಕ್ಕೆ ಕಾರಣವಾಗಿದೆ ಮೋದಿ ಸರ್ಕಾರದ ಮುಂದಿನ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಾಕ್ ಡೌನ್’ ಮುಗಿಯಲು ಇನ್ನು ಮೂರೇ ದಿನ: ಕುತೂಹಲಕ್ಕೆ ಕಾರಣವಾಗಿದೆ ಮೋದಿ ಸರ್ಕಾರದ ಮುಂದಿನ ನಡೆ

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಲಾಕ್ ಡೌನ್ ಜಾರಿಗೊಳಿಸಿದ್ದು, ಎರಡನೇ ಹಂತದ ಲಾಕ್ ಡೌನ್ ಅವಧಿ ಮೇ 3 ರಂದು ಅಂತ್ಯಗೊಳ್ಳಲಿದೆ.

ಆದರೆ ಕರೋನಾ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮೂರನೇ ಅವಧಿಗೂ ಮುಂದುವರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದರ ಮಧ್ಯೆ ಲಾಕ್ ಡೌನ್ ನಿಂದಾಗಿ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧವಾಗಿದ್ದು, ಜನತೆ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರಗಳು ಕೂಡಾ ನೌಕರರಿಗೆ ಸಂಬಳ ನೀಡಲು ಪರದಾಡುತ್ತಿದ್ದು, ಆರ್ಥಿಕ ಚಟುವಟಿಕೆಗಳಿಗೆ ಇನ್ನಷ್ಟು ರಿಯಾಯಿತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿವೆ.

ಹೀಗಾಗಿ ಆರ್ಥಿಕ ಚಟುವಟಿಕೆಯನ್ನು ಆರಂಭಿಸುವುದರ ಜೊತೆಗೆ ಕರೋನಾ ನಿಯಂತ್ರಣದ ಮಹತ್ವದ ಜವಾಬ್ದಾರಿಯೂ ಕೇಂದ್ರ ಸರ್ಕಾರದ ಮೇಲಿದ್ದು, ಲಾಕ್ಡೌನ್ ವಿಸ್ತರಣೆ ಕುರಿತಂತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಬಹುತೇಕ ನಾಳೆಯೊಳಗಾಗಿ ಕೇಂದ್ರ ಸರ್ಕಾರದ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...