alex Certify ವಕೀಲರಿಗೆ ಡ್ರೆಸ್ ಕೋಡ್ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಕೀಲರಿಗೆ ಡ್ರೆಸ್ ಕೋಡ್ ನಿಗದಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ನ್ಯಾಯಾಲಯಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸುತ್ತಿವೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಕಲಾಪದ ವೇಳೆ ವಕೀಲರು ಕೋಟು – ಗೌನ್ ಧರಿಸಿದರೆ ಕೊರೊನಾ ಸೋಂಕು ಹರಡುವಿಕೆಗೆ ಕಾರಣವಾಗಬಹುದೆಂಬ ಕಾರಣಕ್ಕೆ ಇದನ್ನು ಧರಿಸದಂತೆ ವಿನಾಯಿತಿ ನೀಡಲಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ಸುತ್ತೋಲೆ ಪ್ರಕಾರ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ವಕೀಲರಿಗೆ ಡ್ರೆಸ್ ಕೋಡ್ ನಿಗದಿಪಡಿಸಲಾಗಿದೆ. ವಕೀಲರು ಬಿಳಿ ಬಣ್ಣದ ಶರ್ಟ್ ಮತ್ತು ಬಿಳಿಯ ನೆಕ್ ಬ್ಯಾಂಡ್ ಹಾಗೂ ವಕೀಲೆಯರು ಬಿಳಿ ಬಣ್ಣದ ಸಲ್ವಾರ್ ಕಮೀಜ್ ಅಥವಾ ಬಿಳಿ ಬಣ್ಣದ ಸೀರೆ ಮತ್ತು ನೆಕ್ ಬ್ಯಾಂಡ್ ಧರಿಸಬೇಕೆಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...