ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಭಾರತದಲ್ಲೂ ಕಾಣಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮಾಹಿತಿ ತಂತ್ರಜ್ಞಾನ ಕಂಪನಿಗಳು ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ತಮ್ಮ ಉದ್ಯೋಗಿಗಳಿಗೆ ತಿಳಿಸಿದ್ದವು.
ಇದೀಗ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಸರ್ಕಾರಿ ಕಚೇರಿಗಳು ಹಾಗೂ ಕೆಲ ಖಾಸಗಿ ಸಂಸ್ಥೆಗಳು ಆರಂಭವಾಗಿದ್ದರೂ ಸಹ ಐಟಿ ಕಂಪನಿಗಳು ಮಾತ್ರ ತನ್ನ ಉದ್ಯೋಗಿಗಳಿಗೆ ಡಿಸೆಂಬರ್ ವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಸೂಚನೆ ನೀಡಿವೆ ಎಂದು ಹೇಳಲಾಗಿದೆ.
ಈಗ ಎಲ್ಲೆಡೆ ಇಂಟರ್ನೆಟ್ ಸಂಪರ್ಕ ಲಭ್ಯವಿರುವ ಕಾರಣ ಲಾಕ್ಡೌನ್ ಸಂದರ್ಭದಲ್ಲೂ ಸಹ ಐಟಿ ಕಂಪನಿಗಳ ಕಾರ್ಯ ನಿರ್ವಹಣೆಗೆ ಯಾವುದೇ ಅಡ್ಡಿಯಾಗಿರಲಿಲ್ಲವೆಂದು ಹೇಳಲಾಗಿದೆ. ಹೀಗಾಗಿ ವರ್ಷಾಂತ್ಯದವರೆಗೆ ಇದನ್ನು ಮುಂದುವರಿಸಲು ತೀರ್ಮಾನಿಸಲಾಗಿದ್ದು, ಕೆಲ ಕಂಪನಿಗಳು ಆ ಬಳಿಕವೂ ‘ವರ್ಕ್ ಫ್ರಮ್ ಹೋಮ್’ ಗೆ ಆದ್ಯತೆ ನೀಡಲು ಸಿದ್ಧತೆ ನಡೆಸಿವೆ ಎನ್ನಲಾಗಿದೆ.