alex Certify ವಲಸೆ ಕಾರ್ಮಿಕರಿಗೆ ಬಿಸ್ಕೆಟ್ ಎಸೆದ ರೈಲ್ವೆ ಅಧಿಕಾರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕಾರ್ಮಿಕರಿಗೆ ಬಿಸ್ಕೆಟ್ ಎಸೆದ ರೈಲ್ವೆ ಅಧಿಕಾರಿ…!

ಕೊರೊನಾ ಕಾರಣಕ್ಕೆ ಮಾರ್ಚ್ 25ರಿಂದ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ಕೆಲಸವಿಲ್ಲದೆ ಅತಂತ್ರವಾಗಿರುವ ವಲಸೆ ಕಾರ್ಮಿಕರು ಒಪ್ಪೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದಾರೆ. ಇದರಿಂದ ಅನಿವಾರ್ಯವಾಗಿ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದು, ಇವರುಗಳು ತೆರಳಲು ಕೇಂದ್ರ ಸರ್ಕಾರ ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಿದೆ.

ವಲಸೆ ಕಾರ್ಮಿಕರ ಸಂಕಷ್ಟಕ್ಕೆ ದೇಶದಾದ್ಯಂತ ಶ್ರೀಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಸ್ಪಂದಿಸುತ್ತಿರುವ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಯೊಬ್ಬ ಅಮಾನವೀಯವಾಗಿ ವರ್ತಿಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಫಿರೋಜಾಬಾದ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಟಿಕೆಟ್ ತಪಾಸಣೆಕಾರ ಡಿ.ಕೆ. ದೀಕ್ಷಿತ್ ಎಂಬಾತ ತನ್ನ ಸಹೋದ್ಯೋಗಿಗಳ ಜೊತೆ ಸೇರಿ ವಲಸೆ ಕಾರ್ಮಿಕರಿಗೆ ಬಿಸ್ಕೆಟ್ ಎಸೆದಿದ್ದಾನೆ. ಅಲ್ಲದೇ ಕಾರ್ಮಿಕರನ್ನು ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಇದೀಗ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...