ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿ ವೇಳೆ ಮೈಲುದ್ದದ ಕ್ಯೂ ಇರುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಫಾಸ್ಟ್ ಟ್ಯಾಗ್ ನಿಯಮ ಜಾರಿಗೆ ತಂದಿದೆ.
ಟೋಲ್ ಗೇಟ್ ಮೂಲಕ ಹಾದುಹೋಗುವ ವಾಹನಗಳು ಫಾಸ್ಟ್ಯಾಗ್ ಹೊಂದಿರುವುದು ಕಡ್ಡಾಯವಾಗಿದ್ದು, ಈ ಮೊದಲು ಇದು ಇಲ್ಲದೆ ಇರುವ ವಾಹನಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವ ನಿಯಮ ಜಾರಿಗೊಳಿಸಲಾಗಿತ್ತು.
ಇದೀಗ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಇನ್ನು ಮುಂದೆ ಫಾಸ್ಟ್ಯಾಗ್ ಇಲ್ಲದಿದ್ದರೆ, ಕ್ರಮಬದ್ಧವಾಗಿರದಿದ್ದರೆ ಅಥವಾ ನಿಷ್ಕ್ರಿಯವಾಗಿದ್ದರೆ ಎರಡು ಪಟ್ಟು ಶುಲ್ಕ ಪಾವತಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.