ಜೆಇಇ – ನೀಟ್ ಪರೀಕ್ಷೆಯನ್ನು ಮುಂದೂಡುವಂತೆ 6 ರಾಜ್ಯಗಳು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಜೆಇಇ ಮತ್ತು ನೀಟ್ ಪರೀಕ್ಷೆಗಳು ನಿಗದಿತ ದಿನಾಂಕದಂದು ನಡೆಯಲಿವೆ.
ಬಿಜೆಪಿಯೇತರ 6 ರಾಜ್ಯಗಳ ಕ್ಯಾಬಿನೆಟ್ ಮಂತ್ರಿಗಳು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಲು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದವು. ಆಗಸ್ಟ್ 17 ರಂದು ಜಾರಿಗೆ ಬಂದ ಆದೇಶವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಲಾಗಿತ್ತು.
ಇತ್ತೀಚೆಗೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪರೀಕ್ಷೆಯನ್ನು ಮುಂದೂಡಲು 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿತ್ತು. ಇದರಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿದ್ಧ ಎಂದಿದ್ದರು.
ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 17 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪರೀಕ್ಷೆಯನ್ನು ಮುಂದೂಡುವುದರಿಂದ ವಿದ್ಯಾರ್ಥಿಗಳ ವೃತ್ತಿಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ಕೋರ್ಟ್ ಹೇಳಿತ್ತು.