alex Certify ವಿದ್ಯುತ್‌ ಕಂಪನಿಗಳ ಖಾಸಗೀಕರಣಕ್ಕೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್‌ ಕಂಪನಿಗಳ ಖಾಸಗೀಕರಣಕ್ಕೆ ನಿರ್ಧಾರ

ವಿದ್ಯುತ್ ಕ್ಷೇತ್ರದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ. ಕೇಂದ್ರಾಡಳಿತ ಪ್ರದೇಶಗಳ ಖಾಸಗೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ.

ಡಿಸ್ಕಾಂಗಳ ಅಸಮರ್ಥತೆಯಿಂದ ಗ್ರಾಹಕರಿಗೆ ಹೊರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಡಿಸ್ಕಾಂಗಳಿಂದ ಸಾರ್ವಜನಿಕರಿಗೆ ತೊಂದರೆಯಾದ್ರೆ ಕಂಪನಿಗಳಿಗೆ ದಂಡ ವಿಧಿಸಲಾಗುವುದು. ಹಾಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೆ ಲೋಡ್ ಶೆಡ್ಡಿಂಗ್ ಮಾಡಿದ್ರೆ ಕಂಪನಿಗಳು ದಂಡ ವಿಧಿಸಬೇಕಾಗುತ್ತದೆ. ಸ್ಮಾರ್ಟ್ ಪ್ರಿಪೇಡ್ ಮೀಟರ್ ಅಳವಡಿಸಲು ಒತ್ತು ನೀಡಲಾಗ್ತಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಸುಧಾರಣೆ ತರಲಾಗ್ತಿದೆ. ಇದಕ್ಕೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ನೆರವು ನೀಡಲು ನಿರ್ಧರಿಸಲಾಗಿದೆ. ಹಾಗೆ ಉಪಗ್ರಹಗಳ ಉಡಾವಣೆಯಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡಲಾಗಿದೆ. ಇಸ್ರೋ ಸೌಲಭ್ಯಗಳನ್ನು ಖಾಸಗಿ ಕಂಪನಿಗಳು ಬಳಸಿಕೊಳ್ಳಬಹುದಾಗಿದೆ.

ಅಣು ಇಂಧನ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಅವಕಾಶ ನೀಡಲಾಗಿದೆ. ಕ್ಯಾನ್ಸರ್ ನಂತಹ ರೋಗಕ್ಕೆ ಅಣು ತಂತ್ರಜ್ಞಾನ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಸಾಮಾಜಿಕ ಮೂಲ ಸೌಕರ್ಯಕ್ಕೆ ಕೇಂದ್ರ ಸರ್ಕಾರ 8,100 ಕೋಟಿ ನೀಡಲು ನಿರ್ಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...