alex Certify ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ: ತಪ್ಪಿದ ಭಾರೀ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ: ತಪ್ಪಿದ ಭಾರೀ ಅನಾಹುತ

ಮುಂಬೈನಲ್ಲಿ ದೊಡ್ಡ ಅಪಘಾತವೊಂದು ಕೂದಲೆಳೆಯಲ್ಲಿ ತಪ್ಪಿದೆ. ಇಂಡಿಗೊ ವಿಮಾನಕ್ಕೆ ಹಕ್ಕಿ  ಡಿಕ್ಕಿ ಹೊಡೆದಿದೆ. ತಕ್ಷಣ ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆಂದು ಮೂಲಗಳು ಹೇಳಿವೆ.

ಇಂಡಿಗೊದ ಫ್ಲೈಟ್ 6 ಇ 5047 ಭಾನುವಾರ ಮುಂಬೈನಿಂದ ದೆಹಲಿಗೆ ಹೊರಟಿತ್ತು. ಈ ಸಮಯದಲ್ಲಿ ಪಕ್ಷಿ  ಡಿಕ್ಕಿ ಹೊಡೆದಿದೆ. ತಕ್ಷಣ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಲಾಗಿದೆ. ಪ್ರಯಾಣಿಕರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಆದ್ರೆ ಮತ್ತೊಂದು ವಿಮಾನ ವ್ಯವಸ್ಥೆ ಮಾಡಲು ಸ್ವಲ್ಪ ಸಮಯ ತೆಗೆದುಕೊಂಡಿದ್ದರಿಂದ ಪ್ರಯಾಣಿಕರಿಗೆ ಪ್ರಯಾಣದಲ್ಲಿ ಸ್ವಲ್ಪ ವಿಳಂಬವಾಯ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...