ದೇಶದಾದ್ಯಂತ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಇದರ ಮಧ್ಯೆ ವಿಷು ಹಬ್ಬದ ಪ್ರಯುಕ್ತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ಏಪ್ರಿಲ್ 10 ರಿಂದ 8 ದಿನಗಳ ಕಾಲ ತೆರೆಯಲಾಗುತ್ತಿದೆ.
ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಕೋವಿಡ್ ನಿಯಮಾನುಸಾರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರತಿದಿನ 10 ಸಾವಿರ ಮಂದಿಗೆ ದರ್ಶನಕ್ಕೆ ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.
ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಸುಗ್ರೀವಾಜ್ಞೆ ಜಾರಿ ಸಾಧ್ಯತೆ
ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರು ಆರ್ ಟಿ – ಪಿಸಿಆರ್ ನೆಗೆಟಿವ್ ವರದಿಯನ್ನು ತರುವುದು ಕಡ್ಡಾಯವಾಗಿದ್ದು, ಏಪ್ರಿಲ್ 18ರ ರಾತ್ರಿ ಪೂಜೆಯ ಬಳಿಕ 9 ಗಂಟೆಗೆ ದೇವಾಲಯವನ್ನು ಮತ್ತೆ ಮುಚ್ಚಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.