ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಗುರುವಾರ 3 ವರ್ಷದ ಬಾಲಕಿಯ ಶವ ಕಬ್ಬಿನ ಹೊಲದಲ್ಲಿ ಪತ್ತೆಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ನಂತರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಆಘಾತಕಾರಿ ಸಂಗತಿಯೆಂದ್ರೆ ಲಖಿಂಪುರ ಖೇರಿ ಜಿಲ್ಲೆಯಲ್ಲಿ 20 ದಿನಗಳಲ್ಲಿ ಇದು ಮೂರನೇ ಅತ್ಯಾಚಾರವಾಗಿದೆ.
ಬುಧವಾರ ಬಾಲಕಿ ಕಾಣೆಯಾಗಿದ್ದಳು. ಗುರುವಾರ ಆಕೆ ಶವ ಸಿಕ್ಕಿದೆ. ತಲೆ ಮೇಲೆ ಗಾಯ ಕಂಡು ಬಂದಿದೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ರೇಖಾ ರಾಮ್ ಎಂಬ ವ್ಯಕ್ತಿ ಈ ಕೃತ್ಯವೆಸಗಿದ್ದಾನೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಕಳೆದ 20 ದಿನಗಳಲ್ಲಿ ಈ ಜಿಲ್ಲೆಯಲ್ಲಿ ಮೂರು ಘಟನೆ ನಡೆದಿದೆ. ಆಗಸ್ಟ್ 14 ರಂದು 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಆಗಸ್ಟ್ 24 ರಂದು ನೀಮ್ಗಾಂವ್ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಈಗ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.