ದೇಶದಾದ್ಯಂತ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸೋಂಕು ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅದರಲ್ಲೂ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತೀವ್ರ ನಿಗಾ ವಹಿಸುವಂತೆ ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಲು ಮುಂದಾಗಿದ್ದು, ಕರ್ನಾಟಕ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಇನ್ನುಳಿದಂತೆ ಉತ್ತರಪ್ರದೇಶ, ಕೇರಳ ಹಾಗೂ ಛತ್ತೀಸ್ ಗಡ ಸೇರಿದಂತೆ ಎಲ್ಲ ರಾಜ್ಯಗಳು ಒಂದೊಂದೇ ನಿರ್ಬಂಧಗಳನ್ನು ಹೇರುತ್ತಿವೆ.
ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಸಿಇಟಿ ದಾಖಲಾತಿ ಪರಿಶೀಲನೆಗೆ ಡಿಜಿ ಲಾಕರ್ ಜೋಡಣೆ
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ದೇಶದಲ್ಲಿ ಲಾಕ್ಡೌನ್ ಜಾರಿಯಾಗುತ್ತದಾ ಎಂಬ ಆತಂಕದಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಮರಳುತ್ತಿದ್ದಾರೆ. ಹೀಗಾಗಿ ಕಳೆದ ವರ್ಷ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಶ್ರಮಿಕ ವಿಶೇಷ ರೈಲುಗಳನ್ನು ಬಿಡಲಾಗಿತ್ತು.
ಈ ಬಾರಿಯೂ ಶ್ರಮಿಕ ವಿಶೇಷ ರೈಲು ಸಂಚರಿಸುತ್ತಾ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ರೈಲ್ವೆ ಇಲಾಖೆ, ಕಾರ್ಮಿಕರಿಗಾಗಿ ವಿಶೇಷ ಶ್ರಮಿಕ ರೈಲು ಓಡಿಸುವ ಪ್ರಸ್ತಾವ ಸದ್ಯಕ್ಕಿಲ್ಲ ಎಂದು ತಿಳಿಸಿದೆ. ಪ್ರಸ್ತುತ 1,402 ವಿಶೇಷ ರೈಲುಗಳು ಪ್ರತಿನಿತ್ಯ ಸಂಚರಿಸುತ್ತಿವೆ. ಅಗತ್ಯ ಬಿದ್ದರೆ ಇನ್ನಷ್ಟು ರೈಲುಗಳನ್ನು ಓಡಿಸುತ್ತೇವೆ ಎಂದು ತಿಳಿಸಲಾಗಿದೆ.