ಸಲಿಂಗ ವಿವಾಹದ ಕಾನೂನು ಮಾನ್ಯತೆಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಇದು ಮೌಲ್ಯಗಳಿಗೆ ವಿರುದ್ಧವಾಗಿದ್ದು, ಕಾನೂನು ಹಾಗೂ ಸಮಾಜ ಇದನ್ನು ಒಪ್ಪುವುದಿಲ್ಲ ಎಂದು ತಿಳಿಸಿದೆ.
ದೆಹಲಿ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಾಟೀಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಅರ್ಜಿಯಲ್ಲಿ ಹಿಂದೂ ವಿವಾಹ ಕಾಯ್ದೆ 1956 ರ ಅಡಿಯಲ್ಲಿ ಸಲಿಂಗ ವಿವಾಹಕ್ಕೆ ಅನುಮತಿ ನೀಡುವಂತೆ ಕೋರಲಾಗಿತ್ತು. ಈ ಸಂದರ್ಭದಲ್ಲಿ ತುಷಾರ್ ಮೆಹ್ತಾ, ಹಿಂದೂ ವಿವಾಹ ಕಾಯ್ದೆ ಓರ್ವ ಪುರುಷ ಮತ್ತು ಓರ್ವ ಮಹಿಳೆ ನಡುವಿನ ಸಂಬಂಧವನ್ನು ಮಾತ್ರ ಒಪ್ಪುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.