
ಉತ್ತರ ಪ್ರದೇಶದ ರಾಜಧಾನಿ ಲಖನೌದ ಲೋಕ ಭವನ ಎದುರು ತಾಯಿ, ಮಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಭೂ ವಿವಾದದಿಂದ ಬೇಸತ್ತ ತಾಯಿ-ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಕರಣದಲ್ಲಿ ಅಮೆಥಿಯ ಜಾಮೋ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಭೂ ವಿವಾದ ಪ್ರಕರಣದಲ್ಲಿ ಪೊಲೀಸರು ಕೈಗೊಂಡ ಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ಸಫಿಯಾ ಮತ್ತು ಪುತ್ರಿ ಗುಡಿಯಾ ಲೋಕ ಭವನದ ಮುಂದೆ ಆತ್ಮಹತ್ಯೆಗೆ ಯತ್ನಿಸಿದರು. ಶುಕ್ರವಾರ ಸಂಜೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಅವ್ರನ್ನು ರಕ್ಷಿಸಿದ್ದಾರೆ. ಬೆಂಕಿ ಹಚ್ಚಿದ್ದ ಮಹಿಳೆಯ ಫೋಟೋ ವೈರಲ್ ಆಗಿದೆ. ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.