ವಿಧಾನಸಭಾ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಜಿದ್ದಾಜಿದ್ದಿ ನಡೆಸುತ್ತಿದ್ದರೆ, ಬಿಜೆಪಿ ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಜಯಭೇರಿ ಬಾರಿಸಲು ಸಿದ್ಧತೆ ನಡೆಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭಾರೀ ಪ್ರಚಾರ ನಡೆಸುತ್ತಿದ್ದು, ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಕಾರ್ಯಗಳ ಪರ್ವವೇ ನಡೆಯಲಿದೆ ಎಂದಿದ್ದಾರೆ. ಇನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಬಿಂಬಿಸುತ್ತ ಮತಯಾಚನೆಯಲ್ಲಿ ತೊಡಗಿದ್ದಾರೆ.
ಮಸ್ಕಿ ಉಪಚುನಾವಣೆ: ಅಭ್ಯರ್ಥಿಗಳು ಅವರೇ…! ಪಕ್ಷ ಮಾತ್ರ ಬೇರೆ ಬೇರೆ…!!
ಪುರುಲಿಯಾ ಜಿಲ್ಲೆಯಲ್ಲಿ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ ಸಾರ್ವಜನಿಕ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳಿನ ಕಾರ್ಖಾನೆಯೊಂದನ್ನು ಉಳಿಸಿಕೊಂಡು ಉಳಿದೆಲ್ಲ ಸಾರ್ವಜನಿಕ ಸ್ವತ್ತುಗಳನ್ನು ಕೇಂದ್ರ ಸರ್ಕಾರ ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.