ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ಹಾಗೂ ಕೇಂದ್ರ ಸಚಿವಾಲಯ ನಿರ್ಮಾಣದ ಸೆಂಟ್ರಲ್ ವಿಸ್ಟಾ ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಸೆಂಟ್ರಲ್ ವಿಸ್ಟಾ ಯೋಜನೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸೆಂಟ್ರಲ್ ವಿಸ್ಟಾ ಯೋಜನೆಗೆ ಅನುಮತಿ ನೀಡಲು ಯಾವುದೇ ಸಮಸ್ಯೆ ಇಲ್ಲ ಎಂದು ತೀರ್ಪು ನೀಡಿದೆ.
ಕೇಂದ್ರ ಸರ್ಕಾರ ಹೊಸ ಸಂಸತ್ ಭವನ ಕಟ್ಟಡ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಮುಂದಾಗಿದ್ದು, 20 ಸಾವಿರ ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.