
ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಈಗ ಅಪಾಯಕಾರಿ ಮಟ್ಟ ತಲುಪಿವೆ. ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳು ದಾಖಲಾದ ನಂತ್ರ ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ 13 ಲಕ್ಷ ತಲುಪಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 49,310 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಯಲ್ಲಿ 740 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ ಹೊಸ ಕೊರೊನಾ ಪ್ರಕರಣಗಳು ಹೆಚ್ಚಾದ ನಂತರ ದೇಶದಲ್ಲಿ ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ 12,87,945 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,601 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಇವುಗಳ ಮಧ್ಯೆ ಒಳ್ಳೆಯ ಸುದ್ದಿಯಿದೆ. ಕೊರೊನಾ ಸೋಂಕಿತ ರೋಗಿಗಳ ಚೇತರಿಕೆಯ ಪ್ರಮಾಣವು ವೇಗವಾಗಿ ಹೆಚ್ಚುತ್ತಿದೆ. ದೇಶದಲ್ಲಿ ಕೊರೊನಾ ರೋಗಿಗಳ ಚೇತರಿಕೆಯ ಪ್ರಮಾಣ ಶೇಕಡಾ 63.45ರಷ್ಟಿದೆ.